Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಡಿ ಕನ್ಯಾಣ- ಸೋಲು ಗೆಲವುವನ್ನು ಸಮನಾಗಿ ಸ್ವೀಕರಿಸಿ – ಕಿರಣ್ ಕುಮಾರ್ ಕೊಡ್ಗಿ
ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಕೂಟ ವಿಕ್ರಾಂತ -2025

ಕೋಟ: ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಅದನ್ನು ಸಮನಾಗಿ ಸ್ವೀಕರಿಸಿ ಯಶಸ್ಸಿನತ್ತ ಮುನ್ನುಗ್ಗಿ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಪಟುಗಳಿಗೆ ಕರೆ ನೀಡಿದರು.

ಗುರುವಾರ ಕೋಡಿ ಕನ್ಯಾಣದ ಸೋಮಬಂಗೇರ ಪ್ರೌಢಶಾಲಾ ಮೈದಾನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿಕನ್ಯಾಣ ಇವರ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಕೂಟ ವಿಕ್ರಾಂತ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿ ಅದೇ ರೀತಿ ಕಬಡ್ಡಿ ದೇಶೀಯ ಕ್ರೀಡೆಯಾಗಿ ಹೊರಹೊಮ್ಮಿದ್ದು ಗ್ರಾಮೀಣ ಹಳ್ಳಿಗಾಡಿನಲ್ಲಿ ಆಯೋಜಿಸಿ ಒಂದಿಷ್ಟು ಪ್ರತಿಭೆಗಳು ಅನಾವರಣಗೊಳ್ಳುವ ವೇದಿಕೆಯಾಗಿದೆ, ಸರಕಾರಗಳು ಕ್ರೀಡೆಗಳಿಗೆ ಸದಾ ಪ್ರೋತ್ಸಾಹಿಸುವ ಕಾರ್ಯಗಳನ್ನು ಮಾಡಬಹುದು ಅದನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳಿ ಎಂದು ಕೆರೆನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ , ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಇಲಾಖೆಯ ಸಂಯೋಜಕ ಪ್ರಕಾಶ್ ಬಿ.ಬಿ,ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪ್ರಗತಿ ಯುವಕ ಸಂಘದ ಅಧ್ಯಕ್ಷ ಉದಯ್ ಕಾಂಚನ್, ಶ್ರೀರಾಮ ಮಂದಿರದ ಅಧ್ಯಕ್ಷ ರಾಘವೇಂದ್ರ ಕರ್ಕೇರ, ಕೋಡಿ ಗ್ರಾಮಪಂಚಾಯತ್ ಪಿಡಿಒ ರವೀಂದ್ರ ರಾವ್, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಉಡುಪಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ್, ಕಾರ್ಕಳ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ  ರವಿಚಂದ್ರ ಕಾರಂತ್,ಕುoದಾಪುರ ತಾಲೂಕಿನ ದೈಹಿಕ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಬೈಂದೂರು ತಾಲೂಕಿನ ಅಧಿಕಾರಿ ವಿಜಯ ಕುಮಾರ್ ಶೆಟ್ಟಿ, ಕೋಡಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ತಿಂಗಳಾಯ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ರಾಧಿಕಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಘವೇಂದ್ರ ಅಡಿಗ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಉಪಸ್ಥಿತರಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಪ ಸ್ವಾಗತಿಸಿದರು.
ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವನೆ ಸಲ್ಲಿಸಿದರು. ಚಿತ್ರಪಾಡಿ ಶಾಲಾ ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕ ವಿಜಯ ನಾಯರಿ ವಂದಿಸಿದರು.ಕೋಡಿ ಪಂಚಾಯತ್ ಸದಸ್ಯ ಪ್ರಭಾಕರ್ ಮೆಂಡನ್ ಸಹಕರಿಸಿದರು.

ಕೋಡಿ ಕನ್ಯಾಣದ ಸೋಮಬಂಗೇರ ಪ್ರೌಢಶಾಲಾ ಮೈದಾನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿ ಕನ್ಯಾಣ ಇವರ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಕೂಟ ವಿಕ್ರಾಂತ -2025 ಕಾರ್ಯಕ್ರಮವನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ,ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್,ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ,ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ,ಬ್ರಹ್ಮಾವರ ಕ್ಷೇತ್ರ ಶಿಕ್ಷಣ ಇಲಾಖೆಯ ಸಂಯೋಜಕ ಪ್ರಕಾಶ್ ಬಿ.ಬಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *