
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸನ್ಮಾನ್ಯ ಬಸವರಾಜ ಹೊರಟ್ಟಿ ಅವರ ವಿಶೇಷ ಶಿಫಾರಸಿನ ಮೇರೆಗೆ, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಎಂ. ಸಿದ್ಧರಾಮಯ್ಯ ಅವರು ಕನ್ನಡ ಸಂಘ ಬಹರೈನ್ಗೆ ಒಂದು ಕೋಟಿ ರೂಪಾಯಿಗಳ* ಅನುದಾನವನ್ನು ಅಧಿಕೃತವಾಗಿ ಅನುಮೋದಿಸಿದ್ದಾರೆ.
ಈ ಸಂದರ್ಭದಲ್ಲಿ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ, ಹಾಗೂ ನಿನ್ನೆ ತಾನೇ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ, ಅನಿವಾಸಿ ಭಾರತೀಯ ಸಮಿತಿ – ಕರ್ನಾಟಕ ಇದರ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಮುಖ್ಯಮಂತ್ರಿಗಳಿಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದರು.
ಇಂದು, ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ* ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರದ ಅನುದಾನ ನಿಧಿಯಿಂದ ಬಿಡುಗಡೆ ಮಾಡಲು ಅನುಮತಿ ನೀಡಿದ್ದಾರೆ.
ಇತ್ತೀಚೆಗೆ ಕನ್ನಡ ಸಂಘ ಕಟ್ಟಡ ಸಮುಚ್ಚಯ – “ವಿದೇಶದಲ್ಲಿ ನಿರ್ಮಿತ ಪ್ರಥಮ ಕನ್ನಡ ಭವನ”* ವನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಆರೋಗ್ಯ ಸಚಿವ ಶ್ರೀ ದಿನೇಶ್ ಗುಂಡೂರಾವ್* ಅವರು ಸಂಘದ ಮೂಲಭೂತ ಅಗತ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಧನಸಹಾಯ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರು.
ಮುಖ್ಯಮಂತ್ರಿಗಳ ಈ ಅನುಮೋದನೆಯೊಂದಿಗೆ, ಕನ್ನಡ ಸಂಘ ಬಹರೈನ್ ತನ್ನ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮಹತ್ವದ ನೆರವನ್ನು ಪಡೆಯಲಿದೆ ಹಾಗೂ ಸಂಘದ ಅಧ್ಯಕ್ಷರು ಅಜಿತ್ ಬಂಗೇರ ಅವರು ವೈಯಕ್ತಿಕವಾಗಿ ಹಾಗೂ ಬಹರೈನ್ ಕನ್ನಡಿಗರ ಪರವಾಗಿ ಕೃತಜ್ಞತೆ ಸಲ್ಲಿಸಿದರು.
Leave a Reply