Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮಲ್ಪೆ : ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ…!!

ಮಲ್ಪೆ: ಎ ಕೆ ಎಂ ಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಹತ್ಯೆಗೈದಿರುವ ಘಟನೆ ಇಂದು(ಶನಿವಾರ) ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವುದಾಗಿ ತಿಳಿದುಬಂದಿದೆ.

ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ‌ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಕೊಲೆ ನಡೆದ ಕೊಡವೂರು ಸಾಲ್ಮರದಲ್ಲಿರುವ ಮನೆಗೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಈ ಕೃತ್ಯವನ್ನು ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸೈಫುದ್ದಿನ್ ವಿರುದ್ಧ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು ಉಡುಪಿ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾರೆ. ಎರಡು ಕೊಲೆ ಪ್ರಕರಣದ ನೇರ ಆರೋಪಿಯಾಗಿದ್ದಾನೆ ಎಂದರು. ಬೆಳಗಿನ ಜಾವ 10ರಿಂದ 11 ಗಂಟೆ ನಡುವೆ ದುಷ್ಕೃತ್ಯ ನಡೆದಿದೆ. ಮೂರು ಜನ ಆರೋಪಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.

ಆರೋಪಿಗಳು AKMS ಖಾಸಗಿ ಬಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದಾರೆ. ಕೊಲೆಗೆ ಕಾರಣ ಮತ್ತು ಆರೋಪಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದರು. ಕೊಲೆಗೆ ನಿಖರ ಕಾರಣ ತನಿಖೆಯಿಂದ ಬಹಿರಂಗವಾಗ ಬೇಕಾಗಿದೆ. ಚಾಕು ಮತ್ತು ತಲವಾರ್ ನಿಂದ ದಾಳಿ ಮಾಡಿದ್ದಾರೆ. ದೇಹದ ಹಲವೆಡೆ ಇರಿದ ಗಾಯಗಳಿವೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *