
ಕೋಟ: ಇಂದಿನ ಯುವ ಜನಾಂಗ ಪ್ರತಿಯೊಂದು ಕೆಲಸಕ್ಕೆ ಬೇರೆಯವರನ್ನ ಅವಲಂಬಿಸಿರುತ್ತೇವೆ. ಆದರೆ ಎನ್.ಎಸ್.ಎಸ್. ಶಿಬಿರಗಳು ನಮಗೆ ಜೀವನ ಪಾಠವನ್ನು ಕಲಿಸುವುದರಿಂದ ಪರಾವಲಂಬನೆಯಿoದ ಸ್ವಾವಲಂಬನೆಯ ಪಾಠ ಸಿಗುತ್ತದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.
ಅವರು ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ- ಪಡುಕರೆ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಶ್ರಯದಲ್ಲಿ ಕೋಟತಟ್ಟು ಸ.ಹಿ.ಪ್ರಾ.ಶಾಲೆಯಲ್ಲಿ ಅ.1 ರಂದು ಜರಗಿದ ವಾರ್ಷಿಕ ಎನ್.ಎಸ್.ಎಸ್. ಶಿಬಿರ ಉದ್ಘಾಟಿಸಿ ಮಾತನಾಡಿದರು.
ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದ ಪ್ರತಿಯೊಂದು ಕ್ಷಣಗಳನ್ನು ಅನುಭವಿಸಿ ಜೀವನ ಪಾಠ ತಿಳಿಯುವಂತೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್. ನಾಯಕ ಅಧ್ಯಕ್ಷತೆ ವಹಿಸಿ ಶಿಬಿರದ ರೂಪುರೇಷೆ ತಿಳಿಸಿದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ. ಸತೀಶ ಕುಂದರ್, ಗ್ರಾ.ಪಂ. ಸದಸ್ಯ ರವೀಂದ್ರ ತಿಂಗಳಾಯ, ಕೋಟತಟ್ಟು ಶಾಲಾ ಮುಖ್ಯ ಶಿಕ್ಷಕಿ ಜಾನಕಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಸುಲೈಮಾನ್, ಕಾಲೇಜಿನ ಹಿಂದಿನ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸುದಿನ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್ಯ, ಉಪನ್ಯಾಸಕ ಡಾ.ಸುಬ್ರಹ್ಮಣ್ಯ ಎ. ಇದ್ದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾರ್ಥಿ ಡಾ. ಪ್ರಕಾಶ್ ಕೆ. ಸ್ವಾಗತಿಸಿ, ವಿದ್ಯಾರ್ಥಿಗಳಾದ ಕೀರ್ತನಾ, ತ್ರಿಷಾ ಕಾರ್ಯಕ್ರಮ ನಿರೂಪಿಸಿದರು.
ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ- ಪಡುಕರೆ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಶ್ರಯದಲ್ಲಿ ಕೋಟತಟ್ಟು ಸ.ಹಿ.ಪ್ರಾ.ಶಾಲೆಯಲ್ಲಿ ಅ.1 ರಂದು ಜರಗಿದ ವಾರ್ಷಿಕ ಎನ್.ಎಸ್.ಎಸ್. ಶಿಬಿರವನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್. ನಾಯಕ, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ. ಸತೀಶ ಕುಂದರ್, ಗ್ರಾ.ಪಂ. ಸದಸ್ಯ ರವೀಂದ್ರ ತಿಂಗಳಾಯ ಇದ್ದರು.
Leave a Reply