Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೊರಗರು ಮತ್ತು ಜೇನುಕುರುಬರಿಗೆ ಪ್ರತ್ಯೇಕ ಒಳ ಮೀಸಲಾತಿ ಅಗತ್ಯ

✍️ ಪಾಂಗಾಳ ಬಾಬು ಕೊರಗ.

ಕರ್ನಾಟಕದಲ್ಲಿ ಸುಮಾರ್ 51 ಸಮುದಾಯಗಳು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿವೆ. ವಾಲ್ಮೀಕಿ, ಬೇಡ, ಮರಾಠಿ ನಾಯ್ಕದಂತಹ ಬಲಿಷ್ಠ ಹಾಗೂ ಪ್ರಭಾವಿ ಸಮುದಾಯಗಳು ಎಲ್ಲಾ ಮೀಸಲಾತಿಯ ಅವಕಾಶಗಳನ್ನು ಹಾಗೂ ಸರ್ಕಾರದ  ಸವಲತ್ತು ಕಬಳಿಸಿಕೊಂಡು ಕೊರಗರಂತಹ ಸಣ್ಣಪುಟ್ಟ ಸಮುದಾಯಗಳಿಗೆ ವಂಚಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಜನಸಂಖ್ಯೆ, ಶಿಕ್ಷಣ, ಭೂ ಬಳಕೆ ಹಾಗೂ ರಾಜಕೀಯವಾಗಿಯೂ  ಈ ಸಮುದಾಯಗಳು ಪ್ರಭಲವಾಗಿವೆ.

ಅನಾಧಿ ಕಾಲದಿಂದ ಸಾಮಾಜಿಕ ಶೋಷಣೆ, ದಬ್ಬಾಳಿಕೆಗಳಿಂದ ನೊಂದು ಬೆಂದಿರುವ ಹಾಗೂ ವಿನಾಶದ ಅಂಚಿನಲ್ಲಿರುವ ಕೊರಗರಂತಹ ಅಸುರಕ್ಷಿತ ಸಮುದಾಯಗಳು ಅವರೊಂದಿಗೆ ಸ್ಪರ್ಧಿಸಿ ಸಮಪಾಲು ಪಡೆಯುವುದು ಸಾಧ್ಯವಿಲ್ಲ. ಮೇಲಾಗಿ ಸರಕಾರವೇ ಕೊರಗರು ಮತ್ತು ಜೇನು ಕುರುಬರನ್ನು ಪ್ರೈಮಿಟಿವ್ ಟ್ರೈಬ್ಸ್ ಅಂದರೆ ನೈಜ ದುರ್ಬಲ ಬುಡಕಟ್ಟು ಸಮುದಾಯಗಳೆಂದು ಹಿಂದೆಯೇ ಗುರುತಿಸಿದೆ.

ಆದುದರಿಂದ ಸರ್ಕಾರ ಕಾಲ ವಿಳಂಬ ಮಾಡದೆ ಈ ಎರಡು ಆದಿಮ ಬುಡಕಟ್ಟುಗಳನ್ನು ಪ್ರತ್ಯೇಕಿಸಿ, ಒಳ ಮೀಸಲಾತಿಯನ್ನು ಘೋಷಿಸಬೇಕು. ಪರಿಶಿಷ್ಟ ವರ್ಗಗಳ ಒಟ್ಟು 7 ಶೇಕಡಾ ಮೀಸಲಾತಿಯಲ್ಲಿ ಅರ್ಧ ಪರ್ಸೆಂಟ್ ನ್ನು ಈ ಎರಡು ಮೀಸಲಿಟ್ಟರೆ ಮಾತ್ರ ಇವರ ಪ್ರಗತಿ ಸಾಧ್ಯ. ಇಲ್ಲವಾದಲ್ಲಿ ಕೆಲವೇ ವರ್ಷಗಳಲ್ಲಿ ಕೊರಗ ಸಮುದಾಯವು ಸರ್ವ ನಾಶವಾಗಲಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾಮಾಜಿಕ ಬದ್ಧತೆ ಇರುವ ಜನಸಾಮಾನ್ಯರು, ಸಾರ್ವಜನಿಕರು ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ಹಾಕಬೇಕು*

Leave a Reply

Your email address will not be published. Required fields are marked *