
ಕೋಟ: ಜಿಲ್ಲಾ ಪಂಚಾಯತ್, ಜಿಲ್ಲಾಡಳಿ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ಕೋಡಿ, ಗ್ರಾಮಪಂಚಾಯತ್ ಕೋಡಿ ಇವರ ಆಶ್ರಯದಲ್ಲಿ ಕೇಂದ್ರ ಸರಕಾರದ ಪೋಷಣ್ ಅಭಿಯಾನ, ಮಾಸಾಚರಣೆ ಕಾರ್ಯಕ್ರಮ ಕೋಡಿ ಹೊಸಬೇಂಗ್ರೆ ಅಂಗನವಾಡಿಯಲ್ಲಿ ಜರಗಿತು.
ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಆರೋಗ್ಯ ಸಂಬoಧಿಸಿದ ಹಾಗೂ ಗರ್ಭಿಣಿಯರ ಸಮತೋಲನ ಆಹಾರ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಇದೇ ವೇಳೆ ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ,ಗಿಡ ನಡುವ ಕಾರ್ಯಕ್ರಮ ಜರಗಿತು.
ಮುಖ್ಯ ಅಭ್ಯಾಗತರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ , ಕೋಡಿ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಪಂಚಾಯತ್ ಸದಸ್ಯರಾದ ಕೃಷ್ಣ ಪೂಜಾರಿ ಪಿ, ಸತೀಶ್ ಕುಂದರ್, ಕೋಡಿ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಆರೋಗ್ಯ ನಿರೀಕ್ಷಕ ಪರಸಪ್ಪ,ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮಿ, ಕೋಡಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರಾಮಚಂದ್ರ ಖಾರ್ವಿ, ಬಾಲವಿಕಾಸ ಸಮಿತಿಯ ಸದಸ್ಯ ರಾಘವೇಂದ್ರ ಖಾರ್ವಿ, ಗ್ರಾಮಸ್ಥರಾದ ಪ್ರಭಾಕರ ಬಂಗೇರ , ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಲೋಚನ, ಸದಸ್ಯರಾದ ನಿರ್ಮಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂಗನವಾಡಿ ಯಮುನಾ ನಿರೂಪಿಸಿ ಸ್ವಾಗತಿಸಿದರು. ಜ್ಯೋತಿ ವಂದಿಸಿದರು.
ಕೋಡಿ ಹೊಸಬೇಂಗ್ರೆ ಅಂಗನವಾಡಿಯಲ್ಲಿ ಕೇಂದ್ರ ಸರಕಾರದ ಪೋಷಣ್ ಅಭಿಯಾನ,ಮಾಸಾಚರಣೆ ಕಾರ್ಯಕ್ರಮ ಜರಗಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಉಡುಪಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ, ಕೋಡಿ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಪಂಚಾಯತ್ ಸದಸ್ಯರಾದ ಕೃಷ್ಣ ಪೂಜಾರಿ ಪಿ ಇದ್ದರು.
Leave a Reply