
ಕೋಟ: ಕಾರಂತರು ತಮ್ಮ ಜೀವಿತ ಅವಧಿಯಲ್ಲಿ ನಡೆನುಡಿ ಬಲು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು ಯುವ ಸಮುದಾಯಕ್ಕೆ ಪ್ರೇರಣೆದಾಯಕ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಶನಿವಾರ ಗಿರಿಜಾ ಕಲ್ಯಾಣಮಂಟಪ ಇಲ್ಲಿ ಗೆಳೆಯರ ಬಳಗ ಕಾರ್ಕಡ ಇವರ ಆಶ್ರಯದಲ್ಲಿ ಡಾ.ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ ಅಂಗವಾಗಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಕಾರಂತರು ವಿಶ್ವಮಟ್ಟದಲ್ಲಿ ತಮ್ಮ ಸಾಹಿತ್ಯ, ವಿವಿಧ ರಂಗವನ್ನು ಪರಿಚಯಿಸಿಕೊಂಡವರು ಅಂತಹ ಮಹಾನ್ ಚೇತನ ಹೆಸರಿನಲ್ಲಿ ಪುರಸ್ಕಾರ ಏರ್ಪಡಿಸಿದ ಗೆಳೆಯರ ಬಳಗಕ್ಕೆ ಕೃತಜ್ಞತೆ ಸಲ್ಲಿಸಬೇಕು ಎಂದರು.
ಇದೇ ವೇಳೆ ಸಾಹಿತಿ ಎಚ್ ಶಕುಂತಲ ಭಟ್ ಹಳೆಯಂಗಡಿ ಇವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಯಿತು. ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಕಾರಂತರ ಭಾವ ಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕಾಪು ಸರಕಾರಿ ಪ್ರಥಮದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಕಾರಂತ ಸಂಸ್ಮರಣೆ ಗೈದರು.
ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನನೂರು ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನಿಲಾವರ ಸುರೇಂದ್ರ ಅಡಿಗ, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ್ ನಾವಡ , ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ ಮಯ್ಯ, ಕೋಟ ಸಿ ಎ ಬ್ಯಾಂಕ್ ಸಿಇಒ ಶರತ್ ಕುಮಾರ್ ಶೆಟ್ಟಿ, ದಂತ ವೈದ್ಯೆ ಸರಿತಾ ಉಪಾಧ್ಯಾ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ, ಮಂಗಳೂರು ಕಲಾ ಸಾಹಿತಿ ಎಚ್ ಜನಾರ್ದನ ಹಂದೆ ಉಪಸ್ಥಿತರಿದ್ದರು.
ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಸ್ವಾಗತಿಸಿದರು.ಪುರಸ್ಕಾರ ಪತ್ರವನ್ನು ಮಂಜುನಾಥ್ ಉಪಾಧ್ಯಾ ವಾಚಿಸಿದರು. ಕಾರ್ಯಕ್ರಮವನ್ನು ಬಳಗದ ಉಪಾಧ್ಯಕ್ಷ ಶಶಿಧರ ಮಯ್ಯ ನಿರೂಪಿಸಿದರು. ಕಾರ್ಯದರ್ಶಿ ನಾಗರಾಜ್ ಉಪಾಧ್ಯಾ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾನ ನಮನ, ಅಂಗನವಾಡಿ ಪುಟಾಣಿಗಳ ನೃತ್ಯ,ಬಡಗುತಿಟ್ಟು ಶೈಲಿಯ ಶ್ರೀದೇವಿ ಯಕ್ಷಕಲಾ ವೃಂದ ಯಕ್ಷಗಾನ ಶ್ರೀ ಕೃಷ್ಣ ತುಲಾಭಾರ ಪ್ರದರ್ಶನಗೊಂಡಿತು.
Leave a Reply