
ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಸಂಭ್ರಮೋತ್ಸವದ ಅಂಗವಾಗಿ ವಿವಿಧ ಜನಪರ ಕಾರ್ಯಕ್ರಮಗಳ ನಡುವೆ ಸಮಾಜಿಕ ಪ್ರಜ್ಞೆ ಹೆಚ್ಚಿಸುವ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದರ ಭಾಗವಾಗಿ ಕ್ಯೂ ಆರ್ ಕೊಡ್ ಮೂಲಕ ಪ್ರಶ್ನಾವಳಿಗೆ ಉತ್ತರಿಸಿ ಅತಿ ಹೆಚ್ಚು ಪ್ರಶ್ನಾವಳಿಗೆ ಉತ್ತರಿಸಿದರವರಿಗೆ ಬಹುಮಾನ ಗೆಲ್ಲಿ ಎಂಬ ವಿನೂತನ ಕಾರ್ಯಕ್ರಮ ರೂಪಿಸಿದೆ ಇದೇ ಅಕ್ಟೋಬರ್ 23ಕ್ಕೆ ಕೊನೆಯ ದಿನವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪಟ್ಟಣಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾಧಿಕಾರಿ ಮೂಲಕ ಚಾಲನೆ
ಪ್ರಶ್ನಾವಳಿ ಉತ್ತರಿಸಿ ಬಹುಮಾನ ಗೆಲ್ಲಿ ಎಂಬ ವಿನೂತನ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಇತ್ತೀಚಿಗೆ ಕ್ಯೂ ಆರ್ ಕೊಡ್ ಬಿಡುಗಡೆಗೊಳಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸ್ಥಾಯೀ ಸಮಿತಿಯ ಅನುಸೂಯ ಹೇರ್ಳೆ, ಸದಸ್ಯರಾದ ಸಂಜೀವ ದೇವಾಡಿಗ, ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್, ಆರೋಗ್ಯ ನಿರೀಕ್ಷಕಿ ಮಮತಾ ಇದ್ದರು.

ಸಾಲಿಗ್ರಾಮ ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಸಂಭ್ರಮ ಪ್ರಶ್ನಾವಳಿಗೆ ಉತ್ತರಿಸಿ ಬಹುಮಾನ ಗೆಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಇತ್ತೀಚಿಗೆ ಕ್ಯೂ ಆರ್ ಕೊಡ್ ಬಿಡುಗಡೆಗೊಳಿಸಿ ಚಾಲನೆ ನೀಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸ್ಥಾಯೀ ಸಮಿತಿಯ ಅನುಸೂಯ ಹೇರ್ಳೆ ಇದ್ದರು.
Leave a Reply