ಕೋಟ: ಕೋಟ ವಿದ್ಯಾ ಸಂಘ ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟವು ವಿಜೃಂಭಣೆಯಿAದ ನಡೆಯಿತು. ಸಮಾರಂಭವನ್ನು ಭಾರತೀಯ ಮಿಲಿಟರಿಯಲ್ಲಿ ಆಡಳಿತಾತ್ಮಕ ಸಹಾಯಕ ಅಧಿಕಾರಿಯಾಗಿ ಜಾಮ್ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿ ಎಸ್.ಜಿ.ಟಿ. ಶ್ರೀಕಾಂತ್ ಮಧ್ಯಸ್ಥ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿ ತುಂಬಿದರು.
ತಮ್ಮ ವೃತ್ತಿ ಬದುಕಿನ ಅನುಭವಗಳನ್ನು ಹಂಚಿಕೊAಡ ಶ್ರೀ ಶ್ರೀಕಾಂತ್ ಮಧ್ಯಸ್ಥ ಅವರು, “ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯಿಂದ ಕಲಿಯುವ ಶಿಸ್ತು, ಸಂಯಮ ಮತ್ತು ಸವಾಲುಗಳನ್ನು ಎದುರಿಸುವ ಮನೋಭಾವವು ಮಿಲಿಟರಿ ಸೇವೆ ಸೇರಿದಂತೆ ಯಾವುದೇ ಉನ್ನತ ಸಾಧನೆಗೆ ಬುನಾದಿಯಾಗುತ್ತದೆ. ಕ್ರೀಡೆಯಲ್ಲಿ ಸಕ್ರಿಯರಾಗಿದ್ದರಿಂದಲೇ ನಾನು ಭಾರತೀಯ ಮಿಲಿಟರಿ ವೃತ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಯಿತು” ಎಂದರು.
ವಿದ್ಯಾರ್ಥಿ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದ ಬಹುಮಾನ ಪಡೆದಿದ್ದನ್ನು ಸ್ಮರಿಸಿದ ಅವರು, ತಮ್ಮ ಈ ಸಾಧನೆಗೆ ಸಹಕರಿಸಿದ ಎಲ್ಲ ದೈಹಿಕ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ, ವಿದ್ಯಾರ್ಥಿಗಳು ಕೇವಲ ಗೆಲುವಿಗಾಗಿ ಅಲ್ಲದೇ ಉತ್ತಮ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಯೋಧ ಶ್ರೀಕಾಂತ್ ಮಧ್ಯಸ್ಥ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಕೋಟ ವಿದ್ಯಾ ಸಂಘದ ಜತೆ ಕಾರ್ಯದರ್ಶಿ ಪಿ.ಮಂಜುನಾಥ್ ಉಪಾಧ್ಯಾ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ಪ್ರಶಸ್ತಿ ಮುಖ್ಯವಲ್ಲ, ಎಲ್ಲರೂ ಭಾಗವಹಿಸುವುದು ಮುಖ್ಯ ಎಂದು ಕರೆ ನೀಡಿ ಕ್ರೀಡೆಯಿಂದ ಮನಸ್ಸು ಹಗುರವಾಗುತ್ತದೆ ಮತ್ತು ಇದು ಶ್ರೀಕಾಂತ್ ಮಧ್ಯಸ್ಥ ಅವರ ಹಾಗೆ ಉನ್ನತ ಸಾಧನೆ ಗೈಯ್ಯಲು ಸಹಾಯಕ ಎಂದರು.
ಈ ಸಂದರ್ಭದಲ್ಲಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ, ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೀತಿ ರೇಖಾ, ಬಾಲಕರ ಪ್ರೌಢಶಾಲೆಯ ಹಿರಿಯ ಸಹಾಯಕ ಶಿಕ್ಷಕ ಪ್ರೇಮಾನಂದ ಮತ್ತು ಪ್ರಕಾಶ ಮಧ್ಯಸ್ಥ ಉಪಸ್ಥಿತರಿದ್ದರು.
ಕ್ರೀಡೋತ್ಸವವು ವಿವೇಕ ಸಂಸ್ಥೆಯ ವಿದ್ಯಾರ್ಥಿಗಳ ಎನ್ಸಿಸಿ ಪರೇಡ್ ಮತ್ತು ಬ್ಯಾಂಡ್ನೊoದಿಗೆ ಭವ್ಯವಾದ ಪಥಸಂಚಲನದೊoದಿಗೆ ಆರಂಭಗೊoಡಿತು. ಯೋಧ ಶ್ರೀಕಾಂತ್ ಮಾಧ್ಯಾಸ್ಥ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಕಾರ್ಯಕ್ರಮ ನಿರ್ವಹಣೆಯನ್ನು ಚಂದ್ರಶೇಖರ್ ಎಚ್.ಎಸ್., ನರೇಂದ್ರ ಕುಮಾರ್, ಶಿವಪ್ರಸಾದ್ ಶೆಟ್ಟಿಗಾರ್ ಹಾಗೂ ಮಹಾಲಕ್ಷ್ಮೀ ಅವರು ನಿರ್ವಹಿಸಿದರು. ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಸ್ವಾಗತಿಸಿದರು. ಕ್ರೀಡಾಕೂಟದ ಜವಾಬ್ದಾರಿಯನ್ನು ದೈಹಿಕ ಶಿಕ್ಷಕರಾದ ಮಮತಾ, ಗಣೇಶ್ ಶೆಟ್ಟಿ, ವಿಶ್ವನಾಥ್ ನಾಯಕ್ ಹಾಗೂ ರಕ್ಷತ್ ಅವರು ಯಶಸ್ವಿಯಾಗಿ ನಿಭಾಯಿಸಿದರು.
ಕೋಟ ವಿದ್ಯಾ ಸಂಘ ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟದಲ್ಲಿ ಯೋಧ ಶ್ರೀಕಾಂತ್ ಮಧ್ಯಸ್ಥ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ, ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ ಉಡುಪ, ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೀತಿ ರೇಖಾ ಇದ್ದರು.















Leave a Reply