ಕೋಟ: ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್, ಕೈಂಡ್ ಹಾರ್ಟ್ಸ್ ಬಾಳ್ಕುದು, ಶ್ರೀ ವೇಣುಗೋಪಾಲಕೃಷ್ಣ ಎಜ್ಯುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಉಸಿರು ಕೋಟ ಇವರ ಆಸರೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಇದೇ ನವೆಂಬರ್ ತಿಂಗಳ 23 ರಂದು ನಡೆಯುವ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಗುಂಡ್ಮಿ ಉಮೇಶ ಪೂಜಾರಿ ಹಾಗೂ ವಸಂತಿ ಪೂಜಾರಿಯವರ ಪುತ್ರಿ, ವಿವೇಕ ಬಾಲಕಿಯರ ಪ್ರೌಢಶಾಲೆಯ 10ನೆಯ ತರಗತಿ ವಿದ್ಯಾರ್ಥಿನಿ ಬಹುಮುಖ ಪ್ರತಿಭೆಯ ಕುಮಾರಿ ಉನ್ನತಿ ಹಂದಟ್ಟು ಆಯ್ಕೆಯಾಗಿದ್ದಾರೆ.
ಈಕೆ ಯಕ್ಷಗಾನ, ನಾಟಕ, ಹಾಡು ಮೊದಲಾದ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿದ್ದಾರೆ, ಅಂದು ನಡೆಯುವ ಮಕ್ಕಳ ಕವಿಗೋಷ್ಠಿ ಮಕ್ಕಳ ಸಾಂಸ್ಕೃತಿಕ ಉತ್ಸವ ಮತ್ತು ಕಾರಂತ ಬಾಲಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಆನಂದ ಸಿ ಕುಂದರ್, ಅಧ್ಯಕ್ಷರಾದ ಸತೀಶ ಕುಂದರ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಕೈಂಡ್ ಹಾರ್ಟ್ಸ್ನ ಸ್ಟೀಫನ್ ಲೂಯಿಸ್, ಶ್ರೀ ವೇಣುಗೋಪಾಲಕೃಷ್ಣ ಎಜ್ಯುಕೇಶನಲ್ ಸೊಸೈಟಿಯ ಗಣೇಶ ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















Leave a Reply