
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ನ 2025 – 26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ನ.14ರಂದು ಪೂರ್ವಾಹ್ನ 10.30ಕ್ಕೆ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ಜರಗಲಿದೆ.
ಈ ಸಭೆಯಲ್ಲಿ ಜನಪ್ರತಿನಿಧಿಗಳು, ತಾಲೂಕು ಹಾಗೂ ಗ್ರಾಮ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಜರಿರಲಿದ್ದು ಗ್ರಾಮ ಸಭೆಯಲ್ಲಿ ವಿವಿಧ ಯೋಜನೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಅರ್ಜಿಗಳನ್ನು ಪಡೆದು ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಹಾಗೂ ಗ್ರಾಮದ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆ ನೀಡಲು ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Leave a Reply