Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಡಿವೈಡರ್ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದ ಕಾರು : ರಜೆಗೆ ಊರಿಗೆ ಹೊರಟ ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನ…!!

ಧಾರವಾಡ : ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿದ್ದಾರೆ.

ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ತಮ್ಮ ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡ್ರ್ ಗೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ.

ಕಾರು ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್ಪೆಕ್ಟರ್ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.

ಇನ್ಸ್ಪೆಕ್ಟರ್ ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ. ಮೊನ್ನೆ ಅಷ್ಟೇ ಕರ್ನಾಟಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *